ಏತ ನೀರಾವರಿ ಯೋಜನೆ ಟ್ರಾನ್ಸ್‌ಫಾರ್ಮರ್‌ನಿಂದ ಲಕ್ಷ ಲಕ್ಷ ಮೌಲ್ಯದ ಆಯಿಲ್‌, ತಾಮ್ರದ ತಂತಿ ನಾಪತ್ತೆ

ಶಿಕಾರಿಪುರ: ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಯಿಲ್ ಹಾಗೂ ತಾಮ್ರದ ತಂತಿಯನ್ನು ಕಳ್ಳತನ ಮಾಡಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶೀಲವಂತನಕೊಪ್ಪ ಗ್ರಾಮದ ಕುಮದ್ವತಿ ನದಿ ತೀರದ ಕೊಪ್ಪದಕೆರೆ ಏತ ನೀರಾವರಿ ಯೋಜನೆಯ ಘಟಕದಲ್ಲಿ ಘಟನೆ ನಡೆದಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಸಹಾಯಕ ಇಂಜಿನಿಯರ್ ದೀಪು.ಹೆಚ್.ಜೆ. ಈ ಸಂಬಂಧ ದೂರು ನೀಡಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime-News-General-Image

##ಟ್ರಾನ್ಸ್‌ಫಾರ್ಮರ್‌ನಲ್ಲಿ ಆಯಿಲ್‌ ನಾಪತ್ತೆ

ಶೀಲವಂತನಕೊಪ್ಪ ಗ್ರಾಮದಲ್ಲಿ ಪವರ್ ಸಿಸ್ಟಮ್ ಕಂಟ್ರೋಲ್ಸ್ ಡಿಸ್ಟ್ರಿಬ್ಯೂಷನ್ ಟ್ರಾನ್ಸ್‌ಫಾರ್ಮರ್ ಅನ್ನು ಫೆಬ್ರವರಿ ತಿಂಗಳಲ್ಲಿ ಪರೀಕ್ಷಾರ್ಥವಾಗಿ ಚಾರ್ಜ್ ಮಾಡಲಾಗಿತ್ತು. ಜುಲೈ 30ರಂದು ಅಧಿಕಾರಿಗಳು ಪರಿಶೀಲನೆಗಾಗಿ ಟ್ರಾನ್ಸ್‌ಫಾರ್ಮರ್ ತೆರೆದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ ಎಂದು ಆರೋಪಿಸಲಾಗಿದೆ.

ಸುಮಾರು 800 ಲೀಟರ್ ಟ್ರಾನ್ಸ್‌ಫಾರ್ಮರ್ ಆಯಿಲ್ ಹಾಗೂ 600 ಕೆ.ಜಿ. ತಾಮ್ರದ ತಂತಿ ಕಳ್ಳತನವಾಗಿದೆ. ಇವುಗಳ ಮೌಲ್ಯ ₹11 ಲಕ್ಷ ಎಂದು ಅಂದಾಜಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.