ತೀರ್ಥಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ಸಭೆ, ತಹಶೀಲ್ದಾರ್‌, ಅಧಿಕಾರಿಗಳಿಗೆ ಪ್ರಮುಖ ಸೂಚನೆ, ಏನೆಲ್ಲ ಹೇಳಿದರು?

➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಬರ ಮತ್ತು ಅತಿವೃಷ್ಟಿ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

Minister-Madhu-Bangarappa-meeting-at-Thirthahalli-taluk-office

ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಂಭಾವ್ಯ ಧರೆ ಕುಸಿತದ ಸ್ಥಳಗಳನ್ನು ಗುರುತಿಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ನಾಳೆ ಸಂಜೆಯೊಳಗೆ ವರದಿ ನೀಡುವಂತೆ ತಹಸೀಲ್ದಾರರಿಗೆ ಸೂಚಿಸಿದರು. ಮುಂದೆ ಸಾವು-ನೋವು ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ಮಿನಿಸ್ಟರ್‌ ಏನೆಲ್ಲ ಸೂಚಿಸಿದರು? ಇಲ್ಲಿದೆ ಪಾಯಿಂಟ್ಸ್‌

#f1f1f1 - POINT 1

ಧರೆ ಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತ ರಮೇಶ್ ಕುಟುಂಬಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ತುರ್ತು ನೆರವು ಒದಗಿಸಬೇಕು. ಅವರಿಗೆ ಶಾಶ್ವತ ಸೂರು ಕಲ್ಪಿಸಲು ನಿವೇಶನ ಮತ್ತು ಮನೆ ನಿರ್ಮಿಸಿಕೊಡಲು ತಕ್ಷಣದ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಂದಿನ 4 ರಿಂದ 6 ತಿಂಗಳವರೆಗೆ ಬಾಡಿಗೆ ಮನೆಯಲ್ಲಿ ವಾಸಿಸಲು ಅನುಕೂಲವಾಗುವಂತೆ ಬಾಡಿಗೆ ಪಾವತಿಸಲು ವ್ಯವಸ್ಥೆ ಮಾಡಬೇಕು.

#f1f1f1 - POINT 2

ಮಳೆ ಮಾಪನ ಕೇಂದ್ರಗಳು ಸದಾ ಕ್ರಿಯಾಶೀಲವಾಗಿರಬೇಕು. ತಪ್ಪಾದ ಮಾಹಿತಿ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರತಿದಿನದ ಮಳೆಯ ಪ್ರಮಾಣದ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ರೈತರಿಗೆ ತಲುಪಿಸಬೇಕು.

#f1f1f1 - POINT 3

ಶಿಥಿಲಾವಸ್ಥೆಯಲ್ಲಿರುವ ಶಾಲಾ ಮತ್ತು ಅಂಗನವಾಡಿ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸಬಾರದು. ಯಾವುದೇ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಅಗತ್ಯವಿರುವ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಬಿಸಿಯೂಟ ಅಡುಗೆ ಕೋಣೆಗಳ ದುರಸ್ತಿಗೆ ವಿಸ್ತ್ರತ ವರದಿ ಸಲ್ಲಿಸುವಂತೆ ತಿಳಿಸಲಾಯಿತು.

#f1f1f1 - POINT 4

ರಸ್ತೆಗಳ ಇಕ್ಕೆಲಗಳಲ್ಲಿ, ಶಾಲೆಗಳು, ಅಂಗನವಾಡಿಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಅಪಾಯಕಾರಿ ಹಾಗೂ ದುರ್ಬಲ ಮರಗಳನ್ನು ತಕ್ಷಣ ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.

#f1f1f1 - POINT 5

ರಾಜ್ಯದಲ್ಲಿ ಪ್ರಥಮ ಬಾರಿಗೆ ದ್ವಿತೀಯ ಪಿಯು ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ. ಶೂ ಮತ್ತು ಸಾಕ್ಸ್‌ ವಿತರಣೆಗೆ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.

ಎಲೆಚುಕ್ಕೆ ರೋಗ, ಅನುದಾನ ಸಾಲದು

ಸಭೆಯಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಅಡಿಕೆ ಬೆಳೆಗೆ ಕಂಟಕವಾಗಿರುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸರ್ಕಾರ ನೀಡಿರುವ ಅನುದಾನ ಸಾಲುತ್ತಿಲ್ಲ. ಆದ್ದರಿಂದ ಹೆಚ್ಚಿನ ಮೊತ್ತ ಬಿಡುಗಡೆ ಮಾಡಬೇಕು. ಜತೆಗೆ, ಜಲಜೀವನ್ ಮಿಷನ್ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದ ಮನವಿ ಮಾಡಿದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಎಂಎಡಿಬಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಸೀಲ್ದಾರ್ ರಂಜಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.