ಸಾಗರ: ತಾಲೂಕಿನ ಉಳ್ಳೂರು ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಟೊಮೆಟೊ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿತ್ತು. ಘಟನೆಯಲ್ಲಿ ರಾಶಿ ರಾಶಿ ಟೊಮೆಟೊ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಗಾಯವಾಗಿಲ್ಲ ಹಾಗೂ ಯಾವುದೇ ಜೀವಹಾನಿ ಸಂಭವಿಸಿಲ್ಲ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಚಿಕ್ಕಮಗಳೂರಿನಿಂದ ಗೋವಾದ ಪಣಜಿಗೆ ಟೊಮೆಟೊ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿತ್ತು. ಇದರಿಂದಾಗಿ ಸುಮಾರು ₹40,000 ಮೌಲ್ಯದ ಟೊಮ್ಯಾಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು ಹಾನಿಯಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ.ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಪಿಕಪ್ ವಾಹನದ ಚಾಲಕನ ಆರೋಗ್ಯ ವಿಚಾರಿಸಿದರು. ರಸ್ತೆಯನ್ನು ತೆರವುಗೊಳಿಸಿ ವಾಹನ ಸುಗಮವಾಗಿ ಸಾಗಲು ಅಗತ್ಯ ಸಹಾಯ ಒದಗಿಸಿದರು. ಸ್ಥಳಕ್ಕೆ ಹೆದ್ದಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.