ಸಾಗರ ನಗರಸಭೆಗೆ ಲೋಕಾಯುಕ್ತರು ದಿಢೀರ್‌ ಭೇಟಿ, ದಾಖಲೆಗಳ ಪರಿಶೀಲನೆ, ಕಾರಣವೇನು?

ಸಾಗರ: ಪಟ್ಟಣದ ಜಂಬಗಾರು ಬಡಾವಣೆಯ ಸರ್ವೇ ನಂ. 63ರ 4 ಎಕರೆ ಭೂಮಿ ಅಕ್ರಮವಾಗಿ ಖಾತೆಯಾಗಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಈ ಅಕ್ರಮದ ಸಂಬಂಧ ಲೋಕಾಯುಕ್ತರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಅಗತ್ಯ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ನಗರಸಭೆಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಗಿದೆ.

Sagara-City-Muncipality-Nagarasabhe

ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್‌, ಇನ್‌ಸ್ಪೆಕ್ಟರ್ ರುದ್ರೇಶ್, ವೀರಬಸಪ್ಪ ಹಾಗೂ ಸಿಬ್ಬಂದಿ ಟೀಕಪ್ಪ, ಮಂಜುನಾಥ್, ಸುರೇಂದ್ರ, ಆದರ್ಶ್, ಚಂದ್ರಬಾಯಿ, ಅಂಜಲಿ, ಚೇತನ್ ಮತ್ತು ಆನಂದ್ ಇದ್ದರು.