ಹಾಳಾದ ರಸ್ತೆ, ಸರಿಯಿಲ್ಲದ ಚರಂಡಿ, ನಾಯಿ, ಹಂದಿಗಳ ಹಾವಳಿ, ಪಾಲಿಕೆ ಆಯುಕ್ತರಿಗೆ ಮನವಿ, ಎಲ್ಲಿ?

ಶಿವಮೊಗ್ಗ: ನಗರದ ಆರ್.ಎಮ್.ಎಲ್, ಇಲಿಯಾಸ್ ನಗರ ಮತ್ತು ವಾದಿ-ಎ-ಹುದಾ ಬಡಾವಣೆಗಳಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಪಾಲಿಕೆಯ ವಾರ್ಡ್‌ ನಂ. 34, 28 ಮತ್ತು 31ರ ವ್ಯಾಪ್ತಿಯ ಈ ಬಡಾವಣೆಗಳಲ್ಲಿ ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ರಸ್ತೆಗಳು ಹಾಳಾಗಿವೆ, ಚರಂಡಿ ವ್ಯವಸ್ಥೆ ಸರಿಯಿಲ್ಲ ಹಾಗೂ ಕುಡಿಯುವ ನೀರಿನ ಸಮಸ್ಯೆ ಇದೆ. ಇದರೊಂದಿಗೆ ಬೀದಿ ನಾಯಿ ಮತ್ತು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ದೀಪಗಳೂ ಇಲ್ಲದೆ ರಸ್ತೆಗಳು ಗುಂಡಿ ಬಿದ್ದು ಹೋಗಿವೆ. ಇದರಿಂದ ಪ್ರತಿನಿತ್ಯ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

SDPI-Workers-submit-memorandum-to-Palike-Commissioner

ಈ ಸಂದರ್ಭ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಜಿಲಾನ್ ಖಾನ್, ಪ್ರಮುಖರಾದ ಸಲೀಂ ಖಾನ್, ಇಮ್ರಾನ್ ಅಹಮ್ಮದ್, ಅಬ್ದುಲ್ ಜಮೀರ್, ಇಸಾಕ್ ಅಹಮ್ಮದ್ ಇತರರು ಉಪಸ್ಥಿತರಿದ್ದರು.