ಶಿವಮೊಗ್ಗ: ಅನ್ನಭಾಗ್ಯ ಯೋಜನೆಯಡಿ 2026ರ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಪಡಿತರವನ್ನು ಆಗಸ್ಟ್ ತಿಂಗಳಲ್ಲೇ ಒಂದೇ ಬಾರಿಗೆ ಒಟ್ಟಾಗಿ ವಿತರಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಈ ಆದೇಶದನ್ವಯ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 70 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆದ್ಯತಾ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಡಿತರ ಚೀಟಿದಾರರು ಆಹಾರ ಧಾನ್ಯ ಪಡೆಯುವಾಗ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಹಂಚಿಕೆಗಾಗಿ ಕಡ್ಡಾಯವಾಗಿ ಎರಡು ಬಾರಿ ಬಯೋಮೆಟ್ರಿಕ್ ನೀಡಿ ಪಡಿತರ ಪಡೆಯಬೇಕಿದೆ. ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಸರ್ವರ್ ಲಭ್ಯವಿರುವುದರಿಂದ ಆಗಸ್ಟ್ 31ರ ಒಳಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಪಡಿತರ ಪಡೆದುಕೊಳ್ಳಬಹುದು. ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ ಸಂಖ್ಯೆ 1967ಕ್ಕೆ ಕರೆ ಮಾಡಬಹುದು ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.