ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ತಿರಂಗ ಯಾತ್ರೆ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ನಗರದ ಅಲ್ಲಮಪ್ರಭು ಮೈದಾನದಲ್ಲಿ ಬೈಕ್ ರ್ಯಾಲಿ ಆರಂಭಿಸಲಾಯಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಈ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ನಂತರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಈ ತಿರಂಗ ಯಾತ್ರೆ ಸಾಗಿತು. ದೊಡ್ಡ ಸಂಖ್ಯೆಯ ಬೈಕ್ಗಳಲ್ಲಿ ತ್ರಿವರ್ಣ ಧ್ವಜ ಹಿಡಿದು, ಪೇಟ ತೊಟ್ಟು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಮುಖರಾದ ಎಸ್.ದತ್ತಾತ್ರಿ, ಜ್ಞಾನೇಶ್ವರ್, ಮೋಹನ್ ರೆಡ್ಡಿ ಸೇರಿ ಹಲವರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.