ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಭಾಗವಹಿಸಲಿವೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಯಾರೆಲ್ಲ ಭಾಗವಹಿಸಹಬಹುದು?
18 ರಿಂದ 30 ವರ್ಷದೊಳಗಿನ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು, ಆಸಕ್ತರು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ 9380663606, 9108235132 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.