ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಆಗಸ್ಟ್ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸ್ಥಳದಲ್ಲೇ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಳ್ಳಬಹುದು. ತಮ್ಮ ವಿದ್ಯುತ್ ಬಿಲ್, ಮೀಟರ್ ಸಮಸ್ಯೆ ಅಥವಾ ಇನ್ನಿತರೆ ತಾಂತ್ರಿಕ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು.
