ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದಾರೆ. ಶಿವಮೊಗ್ಗದ ಲಾಡ್ಜ್ಗಳಿಗೆ ಪೊಲೀಸರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಲಾಡ್ಜ್ಗಳಲ್ಲಿ ತಪಾಸಣೆ
ಲಾಡ್ಜ್ಗಳಲ್ಲಿ ತಂಗಿರುವ ವ್ಯಕ್ತಿಗಳು ಹಾಗೂ ಸಂಶಯಾಸ್ಪದವಾಗಿ ಕಂಡುಬಂದವರ ಹಿನ್ನೆಲೆ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದರು. ಈ ವೇಳೆ ಗ್ರಾಹಕರ ನೋಂದಣಿ ಪುಸ್ತಕ ಹಾಗೂ ಲೆಡ್ಜರ್ಗಳನ್ನು ಪರಿಶೀಲಿಸಲಾಗಿದೆ. ಲಾಡ್ಜ್ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಲಾಗಿದೆ. ಅಲ್ಲದೆ, ಮುನ್ನೆಚ್ಚರಿಕೆಗಳ ಬಗ್ಗೆಯೂ ಪರಿಶೀಲನೆ ನಡೆಸಿದ ಪೊಲೀಸರು ಸೂಕ್ತ ಸೂಚನೆಗಳನ್ನು ನೀಡಿದರು.
