ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನ ಮುಂದುವರಿಸಲು ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ಫೆಬ್ರವರಿ 1ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಸಣ್ಣ, ಅತಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ ₹6000 ನಗದನ್ನು ಪ್ರತಿ 4 ತಿಂಗಳಿಗೊಮ್ಮೆ ₹2000 ಗಳಂತೆ 3 ಕಂತುಗಳಲ್ಲಿ ನೀಡಲಾಗುತ್ತದೆ. ಈ ಪ್ರೋತ್ಸಾಹಧನವನ್ನು ಮುಂದುವರಿಸಲು ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ಅಗ್ರಿ ಸ್ಟಾಕ್ ಯೋಜನೆಯಡಿ ಗುರುತಿನ ಸಂಖ್ಯೆಯನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ.

ಇ-ಕೆವೈಸಿ ಮಾಡಿಸುವುದು ಹೇಗೆ?
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ) ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ-ಕೆವೈಸಿ ಪೂರ್ಣಗೊಳಿಸಬಹುದು. ಹಾಗೆಯೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ PMKISAN e-KYC through FaceRecognition App ಮೂಲಕವೂ ರೈತರು ಸ್ವತಃ ಇ-ಕೆವೈಸಿ ಮಾಡಿಕೊಳ್ಳಬಹುದು. ಅರ್ಹ ರೈತರು ಶೀಘ್ರವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ತಿಳಿಸಲಾಗಿದೆ.