ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಶಿವಮೊಗ್ಗ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ವಿಜಯೇಂದ್ರ ಹೇಳಿಕೆ, ಇಲ್ಲಿದೆ 5 ಪಾಯಿಂಟ್

ಹೊಸನಗರ ತಾಲೂಕಿನ ಹರತಾಳು ಗ್ರಾಮದಿಂದ ಗೋವುಗಳನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ವಾಹನವನ್ನು ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗಂಭೀರ ಗಾಯಗೊಂಡಿರುವ ಚಂದನ್ ಶಿಕಾರಿಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಇಂತಹ ಅಕ್ರಮ ಚಟುವಟಿಕೆಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ. ಮುಖ್ಯಮಂತ್ರಿಗಳು ಹಿಂದೂಗಳ ಪರ ಎಂದು ಹೇಳುತ್ತಿದ್ದಾರೆ, ಗೃಹ ಸಚಿವರು ಈ ವಿಚಾರ ಹೊರತು ಉಳಿದೆಲ್ಲ ವಿಷಯ ಮಾತನಾಡುತ್ತಿದ್ದಾರೆ. ಗೃಹ ಸಚಿವರು ಮತ್ತು ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿ ಸ್ಪಂದಿಸಿ, ಅಕ್ರಮ ಗೋ ಸಾಗಾಟಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು. ಈ ಸಂಬಂಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಅವರಿಗು ಕ್ರಮ ಕೈಗೊಳ್ಳುವಂತೆ ಮಾತನಾಡಿದ್ದೇನೆ.


ವಾಲ್ಮೀಕಿ ಅಭಿವೃದ್ಧಿ ನಿಗಮದ ₹185 ಕೋಟಿ ಹಗರಣ, ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ಮೊದಲ ಆರೋಪಿಯಾಗಿದ್ದಾರೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರ ಕ್ಯಾಬಿನೆಟ್‌ನಿಂದ ಅವರನ್ನು ಕೈ ಬಿಡಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಅಂತಹ ಅನಿವಾರ್ಯತೆ ಏನಿತ್ತು ಎಂಬುದು ಬಹಿರಂಗವಾಗಬೇಕಿದೆ. ಭ್ರಷ್ಟಾಚಾರದ ಗಂಭೀರ ಆರೋಪ ಹೊತ್ತಿರುವ ನಾಗೇಂದ್ರ ಅವರು ನ್ಯಾಯಾಲಯದಿಂದ ನಿರ್ದೋಷಿ ಎಂದು ಸಾಬೀತಾಗುವವರೆಗೆ ಅವರನ್ನು ಸಂಪುಟದಿಂದ ಕೈಬಿಡಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಳೆಯಿಂದ ಸದನದ ಒಳಗೆ ಮತ್ತು ಹೊರಗೆ, ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟವನ್ನು ಹಮ್ಮಿಕೊಳ್ಳಲಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಡುತ್ತಿರುವ ಆರೋಪಗಳು ಆಧಾರರಹಿತ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕುವ ಪ್ರಯತ್ನವಾಗಿದೆ. ಆರ್‌ಎಸ್‌ಎಸ್ ದೇಶಭಕ್ತರನ್ನು ನಿರ್ಮಾಣ ಮಾಡುವ ಸಂಘಟನೆ. ಹಿಂದಿನ ಕಾಂಗ್ರೆಸ್ ಸರ್ಕಾರಗಳೇ ಹಲವು ಬಾರಿ ಅದನ್ನು ನಿಷೇಧಿಸಲು ಪ್ರಯತ್ನಿಸಿ ವಿಫಲವಾಗಿವೆ. ಆರ್‌ಎಸ್‌ಎಸ್‌ನಿಂದ ಕಾನೂನು ಬಾಹಿರ ಚಟುವಟಿಕೆ ನಡೆದಿದ್ದರೆ ದೇಶಕ್ಕೆ ತಿಳಿಸಲಿ. ಅದರ ಹೊರತಾಗಿ ಪ್ರಿಯಾಂಕ್ ಖರ್ಗೆ ಅವರು ಸಂಘಟನೆಯ ಬಗ್ಗೆ ಅನುಮಾನ ಹುಟ್ಟುಹಾಕುತ್ತಿರುವುದು ಸರಿಯಲ್ಲ. ಕಲಬುರಗಿಯಲ್ಲಿ ಇಬ್ಬರು ಶಂಕಿತ ಉಗ್ರರರನ್ನು ವಶಕ್ಕೆ ಪಡೆದಿರುವ ಕುರಿತು ಮಾತನಾಡಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿರುದ್ಧ ಮಾತನಾಡಲಿಲ್ಲ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗೆ ಹೋಗಿದ್ದಾರೆ ಎಂದು ಮೂವರನ್ನು ಎನ್‌ಕೌಂಟರ್ ಮಾಡಲಾಗಿದೆ. ಈ ಘಟನೆಯನ್ನು ಖಂಡಿಸುತ್ತೇವೆ. ಬೇಟೆಗೆ ಹೋದರ ಎನ್‌ಕೌಂಟರ್ ಮಾಡುವ ಅವಕಾಶ ಇಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು.

ಭಾರತದ ಸ್ವಾತಂತ್ರ್ಯೋತ್ಸವದ ಸಂದರ್ಭ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಪಠಿಸದಿರುವ ಮೂಲಕ ದೇಶಕ್ಕೆ ಅಪಮಾನ ಮಾಡಿದ್ದಾರೆ. 150 ವರ್ಷಗಳ ಇತಿಹಾಸವಿರುವ ವಂದೇ ಮಾತರಂ ಗೀತೆಯನ್ನು ಗೌರವಿಸದಿರುವುದು ಪ್ರತಿಯೊಬ್ಬ ಸ್ವಾಭಿಮಾನಿ ಭಾರತೀಯರಿಗೂ ನೋವುಂಟುಮಾಡಿದೆ. ಸೋನಿಯಾ ಗಾಂಧಿ ಅವರ ವರ್ತನೆ ಖಂಡಿಸುತ್ತೇವೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.