ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಶಿವಮೊಗ್ಗ ನಗರದ ಸಂಚಾರ ಪೊಲೀಸ್ ಠಾಣೆಗಳ ಆವರಣದಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಲಾದ ನೂತನ ಸಮಾಧಾನ ಕಟ್ಟೆಯನ್ನು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಉದ್ಘಾಟಿಸಿದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಸಾರ್ವಜನಿಕರು ಪೊಲೀಸ್ ಠಾಣೆಗೆ ಆಗಮಿಸಿದ ಸಂದರ್ಭ ಉತ್ತಮ ಹಾಗೂ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಕಟ್ಟೆಯನ್ನು ನಿರ್ಮಿಸಲಾಗಿದೆ. ಆಗಸ್ಟ್ 15 ರಂದು ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಟ್ಟೆಯನ್ನು ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ, ಡಿವೈಎಸ್‌ಪಿ ಸಂಜೀವ್ ಕುಮಾರ್, ಟ್ರಾಫಿಕ್ ಠಾಣೆ ಇನ್ಸ್‌ಪೆಕ್ಟರ್ ದೇವರಾಜ್.ಟಿ.ವಿ., ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ:➤ ಸಮುದಾಯ ಆರೋಗ್ಯ ಕೇಂದ್ರದ ಒಳಗೆ ಹಾವುಗಳು