ಶಿವಮೊಗ್ಗ ಲೈವ್.ಕಾಂ | ಶಿಕಾರಿಪುರ
ಬಜರಂಗದಳ ಕಾರ್ಯಕರ್ತರ ಮೇಲಿ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಆಗಸ್ಟ್ 19 ರಂದು ಶಿಕಾರಿಪುರ ಬಂದ್‌ಗೆ ಕರೆ ನೀಡಿವೆ. ಅಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಕಾರ್ಯದರ್ಶಿ ರಾಜೇಶ್ ಗೌಡ ತಿಳಿಸಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಪತ್ರಿಕಾ ಭವನದಲ್ಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಆಗಸ್ಟ್ 16ರ ರಾತ್ರಿ ಕಳ್ಳರು ಕೊಟ್ಟಿಗೆಯಲ್ಲಿ ಕಟ್ಟಿದ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಜಾನುವಾರು ಸದ್ದು ಕೇಳಿ ಎಚ್ಚೆತ್ತ ಮನೆಯವರು ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.

ಬಜರಂಗದಳ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಕಳ್ಳರ ವಾಹನವನ್ನು ಹಿಂಬಾಲಿಸಿದ್ದಾರೆ. ಮಾರ್ಗಮಧ್ಯೆ ಗೋ ಕಳ್ಳರ ಗುಂಪು ತಮ್ಮ ಇನ್ನೊಂದು ವಾಹನವನ್ನು ಕರೆಸಿಕೊಂಡು, ಕಾರ್ಯಕರ್ತರ ಕಾರಿಗೆ ತಮ್ಮ ವಾಹನದಿಂದ ಬಲವಾಗಿ ಡಿಕ್ಕಿ ಹೊಡೆಸಿದ್ದಾರೆ. ಘಟನೆಯಲ್ಲಿ ಕಾರು ಜಖಂಗೊಂಡಿದೆ. ಕಾರಿನಿಂದ ಇಳಿದ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾರೆ. ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಡಲೇ ಗೋವು ಕಳ್ಳರನ್ನು ಬಂಧಿಸಬೇಕು ಎಂದು ರಾಜೇಶ್ ಗೌಡ ಆಗ್ರಹಿಸಿದರು.
ಶಿಕಾರಿಪುರ ಬಂದ್‌ಗೆ ಅಲ್ಲಿನ ಶಾಸಕರ ಬೆಂಬಲ ಇದೆ. ಅವರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕಾರಿಪುರದ ವರ್ತಕರು ಸ್ವಯಂಪ್ರೇರಿತವಾಗಿ ತಮ್ಮ ಅಂಗಡಿ ಬಂದ್ ಮಾಡಿ ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ.
– ಪ್ರತಿಮಾ ಜೋಗಿ, ವಿಶ್ವ ಹಿಂದೂ ಪರಿಷತ್‌ನ ನಾಯಕಿ
ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಪ್ರಾಂತೀಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು, ಬಜರಂಗದಳದ ಜಿಲ್ಲಾ ಸಂಯೋಜಕ್ ಸಂತೋಷ್ ಶಿವಾಜಿ ಹಾಗೂ ಪ್ರಮುಖರಾದ ನವೀನ್, ಯೋಗೀಶ್, ಸೋಮಶೇಖರ್, ಕೀರ್ತಿ ಉಪಸ್ಥಿತರಿದ್ದರು.