ಮೈಸೂರು – ಶಿವಮೊಗ್ಗ ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾಕೆ? ಯಾವ್ಯಾವ ದಿನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ರೈಲ್ವೆ ಸುದ್ದಿ

ಹಾಸನ ಹಾಗೂ ಹೊಳೆನರಸೀಪುರ ನಿಲ್ದಾಣಗಳ ಯಾರ್ಡ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಶಿವಮೊಗ್ಗ ಮತ್ತು ತಾಳಗುಪ್ಪ ಮಾರ್ಗದ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ರೈಲುಗಳನ್ನು ರದ್ದುಗೊಳಿಸಿದ್ದರೆ, ಇನ್ನು ಕೆಲವು ರೈಲುಗಳ ಮಾರ್ಗ ಹಾಗೂ ಸಮಯವನ್ನು ಬದಲಾಯಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ರೈಲು ಸಂಚಾರ ಭಾಗಶಃ ರದ್ದು

ಆಗಸ್ಟ್ 19 ರಂದು ಮೈಸೂರಿನಿಂದ ಹೊರಡುವ ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225) ರೈಲು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳ್ಳಲಿದೆ.

Night-Train-from-Shivamogga

ಅಲ್ಲದೆ, ಆಗಸ್ಟ್ 25 ಮತ್ತು ಸೆಪ್ಟೆಂಬರ್ 1 ರಂದು ಶಿವಮೊಗ್ಗ ಟೌನ್‌ನಿಂದ ಹೊರಡುವ ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226) ರೈಲು ಅರಸೀಕೆರೆ ಮತ್ತು ಮೈಸೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ.

ರೈಲು ಸಂಚಾರ ನಿಯಂತ್ರಣ

ಆಗಸ್ಟ್ 19 ರಂದು ತಾಳಗುಪ್ಪದಿಂದ ಹೊರಡುವ ತಾಳಗುಪ್ಪ–ಮೈಸೂರು ಕುವೆಂಪು ಎಕ್ಸ್‌ಪ್ರೆಸ್ (16221) ರೈಲು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ.

ರದ್ದಾದ ರೈಲುಗಳು

ಆಗಸ್ಟ್ 19 ರಂದು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267) ಹಾಗೂ ಆಗಸ್ಟ್ 25 ಮತ್ತು ಸೆಪ್ಟೆಂಬರ್ 1 ರಂದು ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268) ರೈಲುಗಳ ಸಂಚಾರ ಸಂಪೂರ್ಣವಾಗಿ ರದ್ದಾಗಿದೆ. ಪ್ರಯಾಣಿಕರು ವೇಳಾಪಟ್ಟಿಯನ್ನು ಗಮನಿಸಿ ಪ್ರಯಾಣಿಸಬೇಕು ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.