ಕೆಲಸ ಖಾಲಿ ಇದೆ, ಶಿವಮೊಗ್ಗದಲ್ಲಿ ಆ.21ರಂದು ನೇರ ಸಂದರ್ಶನ, ಎಲ್ಲಿ? ಯಾರೆಲ್ಲ ಪಾಲ್ಗೊಳ್ಳಬಹುದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

Shivamogga-Job-Update

ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.