ಶಿವಮೊಗ್ಗಕ್ಕೆ ನೂತನ ಉಪ ವಿಭಾಗಾಧಿಕಾರಿ ನೇಮಕ, ಯಾರದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶಿವಮೊಗ್ಗ ಉಪ ವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.ಎಸ್. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಉಪ ವಿಭಾಗಾಧಿಕಾರಿ ಆಗಿದ್ದ ಜಿ.ಹೆಚ್. ಸತ್ಯನಾರಾಯಣ ಅವರನ್ನು ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾಯಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಮೈತ್ರಿ ಹೆಚ್.ಪಿ.ಎಸ್. ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಶಿವಮೊಗ್ಗ ಉಪ ವಿಭಾಗಾಧಿಕಾರಿಯಾಗಿ ವರ್ಗಾಯಿಸಿ ಅಧೀನ ಕಾರ್ಯದರ್ಶಿ ಕೆ.ಹೆಚ್. ಕೇಶವಪ್ರಸಾದ್ ಆದೇಶ ಹೊರಡಿಸಿದ್ದಾರೆ.

himoga-DC-office-and-Police-jeep-in-front-of-office

ಜಿ.ಹೆಚ್. ಸತ್ಯನಾರಾಯಣ ಅವರು ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.