ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಕಾಲೇಜೊಂದರ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಆರೋಪಿ ಪ್ರಿನ್ಸಿಪಾಲ್ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದೆಡೆ ಪ್ರಾಂಶುಪಾಲನನ್ನು ತಕ್ಷಣ ಅಮಾನತು ಮಾಡಬೇಕು, ಕೂಡಲೆ ಅವರನ್ನು ಬಂಧಿಸಬೇಕು ಎಬಿವಿಪಿ ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ದಲಿತ ಸಂಘರ್ಷ ಸಮಿತಿಯ ಪ್ರಮುಖರು ಆರೋಪಿಯನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿ ಕಾಲೇಜು ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.
(ಓದುಗರ ಗಮನಕ್ಕೆ: ಲೈಂಗಿಕ ಕಿರುಕುಳ ಮತ್ತು ಅಪ್ರಾಪ್ತರ ಪ್ರಕರಣಗಳಲ್ಲಿ ಸಂತ್ರಸ್ತೆಯ ಗುರುತು ಬಹಿರಂಗ ಮಾಡವುಂತಿಲ್ಲ. ಆದ್ದರಿಂದ ಕಾಲೇಜಿನ ಹೆಸರು ಅಥವಾ ಪ್ರಾಂಶುಪಾಲರ ವಿವರಗಳನ್ನು ಇಲ್ಲಿ ನೀಡಿಲ್ಲ.)