ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ತುರ್ತು ಕಾಮಗಾರಿ ಮತ್ತು ಕಂಬ ತೆರವು ಮಾಡಲಾಗುತ್ತಿದೆ. ಆದ್ದರಿಂದ ಆಗಸ್ಟ್ 22 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಕರೆಂಟ್ ಇರಲ್ಲ
ಬಾಪೂಜಿನಗರ, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಟಿಜಿಎನ್ ಲೇಔಟ್ ಹಾಗೂ ಟ್ಯಾಂಕ್ ಮೊಹಲ್ಲಾ, ಸೋಮಯ್ಯ ಲೇಔಟ್, ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್ ಇರಲ್ಲ
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ವ್ಯಾಪ್ತಿಯಲ್ಲಿಯೂ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಜಡ್ಜ್ ಕ್ವಾರ್ಟರ್ಸ್, ಎಸ್.ವಿ.ಬಡಾವಣೆ ಸಿ ಬ್ಲಾಕ್ ಹಾಗೂ ವೃದ್ಧಾಶ್ರಮ ಸುತ್ತಮುತ್ತ ವಿದ್ಯುತ್ ಸ್ಥಗಿತಗೊಳ್ಳಲಿದೆ. ಡಾಕ್ಟ್ರರ್ಸ್ ಲೇಔಟ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.