ಪುರದಾಳು ಡ್ಯಾಮ್‌ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿ ದಾಳಿ, ಚಿನ್ನದ ಸರ ಕಸಿದು ಪರಾರಿ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಪುರದಾಳು ರಸ್ತೆಯಲ್ಲಿ ಸ್ನೇಹಿತೆಯರಿಗಾಗಿ ಕಾರು ನಿಲ್ಲಿಸಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ದಾಳಿ ನಡೆಸಿ, ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಕಾಲೇಜು ವಿದ್ಯಾರ್ಥಿನಿ ತನ್ನ ಸ್ನೇಹಿತೆಯರೊಂದಿಗೆ (ಹೆಸರು ಗೌಪ್ಯ) ಪುರದಾಳು ಡ್ಯಾಂ ಕಡೆಗೆ ತೆರಳುತ್ತಿದ್ದರು. ವಿದ್ಯಾರ್ಥಿನಿ ತಮ್ಮ ಕಾರಿನಲ್ಲಿ ತೆರಳಿದ್ದರು. ಸ್ನೇಹಿತೆಯರು ಸ್ಕೂಟಿಯಲ್ಲಿ ಹಿಂದೆ ಬರುತ್ತಿದ್ದರು. ಅವರು ಬರುವವರೆಗೆ ಕಾಯಲು ವಿದ್ಯಾರ್ಥಿನಿ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿದ್ದರು.

070426-Tunga-Nagara-Police-Station-General-Image.avif

ಕೋಲಿನಿಂದ ಗ್ಲಾಸ್‌ಗೆ ಹೊಡೆದ

ರಸ್ತೆ ಬದಿ ಕಾರು ನಿಲ್ಲಿಸಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಕಾರಿನ ಡ್ರೈವರ್ ಸೈಡ್ ಗ್ಲಾಸ್‌ ಅನ್ನು ಕೋಲಿನಿಂದ ಹೊಡೆದು ಒಡೆದಿದ್ದಾನೆ. ಅಲ್ಲದೆ ಅದೇ ಕೋಲಿನಿಂದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ, ಅವರ ಕುತ್ತಿಗೆಯಲ್ಲಿದ್ದ ಸುಮಾರು 15 ಗ್ರಾಂ ತೂಕದ ₹1,40,000 ಮೌಲ್ಯದ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.