ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019
ಭಾವಸಾರ ಕ್ಷತ್ರಿಯ ಸಮಾಜಕ್ಕೆ ಸೇರಿದ ನಿವೇಶನದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಕೂಡಲೆ ತೆರವು ಮಾಡುವಂತೆ ಒತ್ತಾಯಿಸಿ, ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಭಟನೆ ನಡೆಸಿದ ಸಮಾಜದ ಪ್ರಮುಖರು, ಬಾಪೂಜಿನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜಕ್ಕೆ ಸೇರಿದ ನಿವೇಶನವಿದೆ. ಇಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಇದೇ ಜಾಗದಲ್ಲಿ ಕೆಲವರು ಗುಡಿಸಲು ನಿರ್ಮಿಸಿಕೊಂಡಿದ್ದಾರೆ. ಈ ನಿವೇಶನ ಸಮಾಜಕ್ಕೆ ಸೇರಿದ್ದು ಎಂದು ಹೈಕೋರ್ಟ್ ಕೂಡ ಆದೇಶ ನೀಡಿದೆ ಎಂದರು.
ಈಗಾಗಲೇ ಹಾಸ್ಟೆಲ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಈ ಕೂಡಲೆ ಜಾಗ ತೆರವು ಮಾಡಿಕೊಡುವಂತೆ ಒತ್ತಾಯಿಸಿ ಕಳೆದ ವಾರವೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗು ಜಿಲ್ಲಾಡಳಿತ ಯಾವುದೆ ಕ್ರಮ ಕೈಗೊಂಡಿಲ್ಲ. ಕೂಡಲೆ ನಿವೇಶನ ತೆರವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Bhavasara Kshatriya Samaja held a protest against the shimoga district administration today to clear the encroachment.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200