ಸವಳಂಗ ರಸ್ತೆಯಲ್ಲಿ ದರೋಡೆ ಕೇಸ್‌, ಇಬ್ಬರು ಆರೋಪಿಗಳು ಅರೆಸ್ಟ್‌, ಯಾರದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಸವಳಂಗ ರಸ್ತೆಯ ಕೊಮ್ಮನಾಳು ಸಮೀಪದ ಖಾಸಗಿ ಶಾಲೆ ಬಳಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ವ್ಯಕ್ತಿಗೆ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಚಿನ್ನಾಭರಣ ಕಿತ್ತುಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಿಖಿತ್ ಹಾಗೂ ದೀಪು ಎಂದು ಗುರುತಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.  

ಸುಭಾಷ್ ಎಂಬುವವರು ಆಗಸ್ಟ್‌ 14ರ ರಾತ್ರಿ ಕಾರಿನಲ್ಲಿ ಸವಳಂಗಕ್ಕೆ ತೆರಳಿ ವಾಪಸಾಗುತ್ತಿದ್ದರು. ಈ ವೇಳೆ ಕೊಮ್ಮನಾಳು ಸಮೀಪ ಖಾಸಗಿ ಶಾಲೆ ಬಳಿ ಕಾರು ನಿಲ್ಲಿಸಿ ತೆರಳಿದ್ದಾಗ ಹಿಂಬದಿಯಿಂದ ಇಬ್ಬರು ಆರೋಪಿಗಳು ಬಂದಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳು ಚಾಕು ತೋರಿಸಿ ಬೆದರಿಸಿ ಸುಭಾಷ್ ಬಳಿಯಿದ್ದ ₹2000 ನಗದು ಹಾಗೂ ಅಂದಾಜು ₹90,000 ಮೌಲ್ಯದ 6 ಗ್ರಾಂ ತೂಕದ ಚಿನ್ನದ ಬ್ರಾಸ್‌ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Crime-News-General-Image