ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಆಗಸ್ಟ್‌ 25ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ಶಿವಮೊಗ್ಗದ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಆಗಸ್ಟ್‌ 25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಬಿ.ಹೆಚ್.ರಸ್ತೆ, ಗಾಂಧಿಬಜಾರ್, ಕೋಟೆ ರಸ್ತೆ, ಓಬಿಎಲ್ ರಸ್ತೆ, ಸಿಎಲ್ ರಾಮಣ್ಣ ರಸ್ತೆ, ಅಶೋಕ ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ, ಎಲೆರೇವಣ್ಣ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಚಿಕ್ಕಲ್, ಗುರುಪುರ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್.ಎಸ್. ಕಾಲೋನಿ.

power cut mescom ELECTRICITY

ಹರಿಗೆ ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆಯ ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆಯ ವೀರಭದ್ರೇಶ್ವರ ಚಿತ್ರಮಂದಿರದಿಂದ ಮಹಾವೀರ ವೃತ್ತದವರೆಗೆ, ಬಾಲ್‌ರಾಜ್ ಅರಸು ರಸ್ತೆಯ ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ, ಗಾಂಧಿ ಪಾರ್ಕ್, ಲೂರ್ದೂ ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ.

ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.