ರೈತರಿಗೆ ಪ್ರೋತ್ಸಾಹಧನ, ಶಿವಮೊಗ್ಗ ಜಿಲ್ಲೆಯ 1,40,256 ರೈತರ ಇ-ಕೆವೈಸಿ ಬಾಕಿ, ಮಾಡಿಸೋದು ಹೇಗೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್‌.ಕಾಂ | ಶಿವಮೊಗ್ಗ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಪ್ರೋತ್ಸಾಹ ಧನವನ್ನು ನಿರಂತರವಾಗಿ ಪಡೆಯಲು ಜಿಲ್ಲೆಯ ಎಲ್ಲಾ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಅರ್ಹ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ ₹6000 ಪ್ರೋತ್ಸಾಹಧ ನೀಡಲಾಗುತ್ತಿದೆ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೇರವಾಗಿ ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಪ್ರೋತ್ಸಾಹಧನ ಮುಂದುವರಿಸಲು ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯ ಮಾಡಲಾಗಿದೆ.

Agriculture-News-Farmer

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1,40,366 ಫಲಾನುಭವಿಗಳಿದ್ದು, ಇದರಲ್ಲಿ 1,40,256 ರೈತರ ಬಯೋಮೆಟ್ರಿಕ್ ಇ-ಕೆವೈಸಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ. ಶಿವಮೊಗ್ಗ ತಾಲೂಕಿನಲ್ಲಿ 18,565 ಹಾಗೂ ಭದ್ರಾವತಿಯಲ್ಲಿ 19,420 ರೈತರ ಇ-ಕೆವೈಸಿ ಬಾಕಿ ಇದೆ. ತೀರ್ಥಹಳ್ಳಿಯಲ್ಲಿ 16,716, ಸಾಗರದಲ್ಲಿ 20,416 ಹಾಗೂ ಹೊಸನಗರದಲ್ಲಿ 13,134 ಫಲಾನುಭವಿಗಳು ಬಾಕಿ ಉಳಿದಿದ್ದಾರೆ. ಶಿಕಾರಿಪುರದಲ್ಲಿ 25,836 ಹಾಗೂ ಸೊರಬ ತಾಲೂಕಿನಲ್ಲಿ 26,169 ರೈತರು ಇ-ಕೆವೈಸಿ ಮಾಡಿಸಬೇಕಿದೆ. ರೈತರು ಹತ್ತಿರದ ಸಿಎಸ್‌ಸಿ ಕೇಂದ್ರಗಳಿಗೆ ಭೇಟಿ ನೀಡಿ ಬೆರಳಚ್ಚು ಅಥವಾ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಬಹುದು.

ಕೇಂದ್ರ ಸರ್ಕಾರದ PMKISAN e-KYC through FaceRecognition App ಮೂಲಕ ಮುಖದ ದೃಢೀಕರಣದ ಆಧಾರದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲೂ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಫಲಾನುಭವಿ ರೈತರು ಕೂಡಲೇ ತಮ್ಮ ಆಧಾರ್ ಕಾರ್ಡ್‌ನೊಂದಿಗೆ ತೆರಳಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.