ಶಿವಮೊಗ್ಗದಲ್ಲಿ ಬೈಕ್‌ ರ‍್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ವಿವಿಧ ನಿರ್ಬಂಧಗಳನ್ನು ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಬೈಕ್‌ ರ‍್ಯಾಲಿ ನಿಷೇಧ

ಆಗಸ್ಟ್ 25 ರಿಂದ 28 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆಗಸ್ಟ್ 26 ರಂದು ಈದ್ ಮಿಲಾದ್ ಹಬ್ಬ ನಡೆಯಲಿದೆ. ಸೌಹಾರ್ದತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಕಲರ್ ಪೇಪರ್ ಬ್ಲಾಸ್ಟಿಂಗ್‌ಗೂ ಬ್ರೇಕ್

ಆಗಸ್ಟ್ 26 ರಂದು ಈದ್ ಮಿಲಾದ್ ಹಬ್ಬದ ಮೆರವಣಿಗೆ ನಡೆಯಲಿದೆ. ಈ ಸಂದರ್ಭ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ಕೂಡ ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

himoga-DC-office-and-Police-jeep-in-front-of-office