ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಗಸ್ಟ್ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಮೂರು ದಿನವು ವಿವಿಧ ಕಾರ್ಯಕ್ರಮ, ಸ್ಪರ್ಧೆಗಳು ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ದಿನಾಚರಣೆ ನಡೆಸಲಾಗುತ್ತದೆ. ಇ ಬಾರಿ ಖೇಲೇಗಾ ಭಾರತ್, ಜೀತೇಗಾ ಭಾರತ್ ಧ್ಯೇಯವಾಕ್ಯವನ್ನು ನಿಗದಿಪಡಿಸಲಾಗಿದೆ. ಪ್ರತಿ ನಾಗರಿಕರು ಕನಿಷ್ಠ ಒಂದು ಗಂಟೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಅಭಿಯಾನ ಉದ್ದೇಶ. ಈ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಯಾವ್ಯಾವ ದಿನ ಏನೇನಿರುತ್ತೆ?
ಆಗಸ್ಟ್ 28 ರಂದು ಬೆಳಿಗ್ಗೆ 6 ಗಂಟೆಗೆ ಯೋಗ ಅರಿವು, ಆಗಸ್ಟ್ 29 ರಂದು ಬೆಳಿಗ್ಗೆ 7 ಗಂಟೆಗೆ 5 ಕಿಲೋಮೀಟರ್ ದೂರದ ಮ್ಯಾರಾಥಾನ್, ಆಗಸ್ಟ್ 30 ರಂದು ಬೆಳಿಗ್ಗೆ 7 ಗಂಟೆಯಿಂದ ಸೈಕ್ಲೋಥಾನ್ ಮತ್ತು ಜುಂಬಾ ಸ್ಪರ್ಧೆಗಳು ಆಯೋಜಿಸಲಾಗಿದೆ. ಮ್ಯಾರಾಥಾನ್ ವಿಜೇತರಿಗೆ ಪ್ರಥಮ ಬಹುಮಾನ ₹10,000, ದ್ವಿತೀಯ ₹5,000 ಹಾಗೂ ತೃತೀಯ ₹3,000 ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪದಕ ನೀಡಲಾಗುತ್ತದೆ. ಮೂರು ಜನರಿಗೆ ತಲಾ ₹1,000 ಸಮಾಧಾನಕರ ಬಹುಮಾನ ಸಿಗಲಿದೆ.

ಹೆಚ್ಚಿನ ಮಾಹಿತಿಗಾಗಿ 9845863549 ಅಥವಾ 8884816287 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.