ಬೆಂಗಳೂರು: ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆಪ್ಟೆಂಬರ್ 7 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸೆಲ್ ಫೋನ್ ರಿಪೇರಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಸ್ವಯಂ ಉದ್ಯೋಗಿಯಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಇದರಲ್ಲಿ ಪಾಲ್ಗೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಊಟ, ವಸತಿ ಉಚಿತ
ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಉಚಿತವಾಗಿರಲಿದೆ. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, ಸ್ಥಳೀಯ ಭಾಷೆ ಬಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿ ಮುಕ್ತಾಯದ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಅಧಿಕೃತ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಸೆಪ್ಟೆಂಬರ್ 7 ರಂದು ಬೆಳಿಗ್ಗೆ 9:30ಕ್ಕೆ ವಿದ್ಯಾರ್ಹತೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಗೆ ನೇರವಾಗಿ ಹಾಜರಾಗಬಹುದು. ನೇರವಾಗಿ ತೆರಳಲು ಸಾಧ್ಯವಾಗದವರು ಸೆಪ್ಟೆಂಬರ್ 7ರ ಒಳಗೆ ಮೊಬೈಲ ನಂಬರ್: 8970476050, 9591514154, 6363139123, 9686248369 ಅಥವಾ 9886935603 ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.