ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ಕಾರು, ಬೈಕ್‌ ಅಪಘಾತ, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಗರದ ಗಜಾನನ ಗೇಟ್ ಸರ್ಕಲ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.  ಹರೇಕರೆ ನಿವಾಸಿ ಅರ್ಜುನ್.ವಿ (41) ಮೃತ ದುರ್ದೈವಿ.

ಕಲ್ಲೂರು ಇಂಡಸ್ಟ್ರಿಯಲ್ ಏರಿಯಾದ ಸುದ್ದಿ ಭಾರತಿ ಪ್ರೆಸ್‌ನಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 27ರ ರಾತ್ರಿ ಕೆಲಸ ನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನ್ಯೂಮಂಡ್ಲಿ ಸರ್ಕಲ್ ಕಡೆಯಿಂದ ಕಲ್ಲೂರು ಮಂಡ್ಲಿ ಕಡೆಗೆ ಎನ್.ಟಿ. ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ, ತೀರ್ಥಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ಅರ್ಜುನ್ ಕೆಳಗೆ ಬಿದ್ದು ತಲೆ, ಮುಖ ಹಾಗೂ ಎದೆಗೆ ಗಂಭೀರ ಪೆಟ್ಟಾಗಿತ್ತು.  ಕೂಡಲೇ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರ್ಜುನ್ ಮೃತಪಟ್ಟಿದ್ದಾರೆ. ಈ ಸಂಬಂಧ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ACCIDENT-NEWS-GENERAL-IMAGE.