ಶಿವಮೊಗ್ಗದ ಜನರಿಗೆ ಎಚ್ಚರ ವಹಿಸುವಂತೆ ಸೂಚನೆ, ತಾಲೂಕು ಆಸ್ಪತ್ರೆಗಳಲ್ಲಿ ವೈರಲ್‌ ವಾರ್ಡ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜಿಲ್ಲೆಯಲ್ಲಿ ಇನ್‌ಫ್ಲುಯೆಂಜಾ ಹಾಗೂ ಋತುಮಾನದ ಜ್ವರ ಹರಡುವುದನ್ನು ತಡೆಯಲು ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲಾಗಿದೆ. ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಈ ವೈರಸ್ ಹಬ್ಬುವಿಕೆ ಹೆಚ್ಚಾಗಿ ಕಂಡುಬರುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ತಿಳಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ತೀವ್ರ ಸ್ವರೂಪದ ಜ್ವರ, ಕೆಮ್ಮು, ಶೀತ, ಹಳದಿ ಕಫ, ಗಂಟಲು ಕೆರೆತ ಹಾಗೂ ಅತಿಯಾದ ಮೈ-ಕೈ ನೋವು ಇದರ ಪ್ರಮುಖ ಲಕ್ಷಣ. ಉಸಿರಾಟದ ತೊಂದರೆ ಮತ್ತು ಕೋವಿಡ್ ಮಾದರಿಯ ಲಕ್ಷಣಗಳು ಕಂಡುಬಂದರೆ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಲಾಗಿದೆ.

Health-Department-Shimoga-office

ಏನೆಲ್ಲ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು?

ಸೀನುವಾಗ ಮತ್ತು ಕೆಮ್ಮುವಾಗ ಮೂಗು-ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಸೋಪು ಮತ್ತು ನೀರಿನಿಂದ ಕೈಗಳನ್ನು ಆಗಾಗ ತೊಳೆಯಬೇಕು. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ರೋಗಲಕ್ಷಣ ಇರುವವರು ಪ್ರತ್ಯೇಕವಾಗಿರಬೇಕು. ಜನಸಂದಣಿ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.

ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇ ಪದೆ ಮುಟ್ಟಬಾರದು. ವೈದ್ಯರ ಸಲಹೆ ಪಡೆಯದೆ ಔಷಧೋಪಚಾರ ಮಾಡಿಕೊಳ್ಳಬಾರದು. ರೋಗ ಲಕ್ಷಣಗಳಿದ್ದಾಗ ಜನಸಂದಣಿಗೆ ಹೋಗುವುದನ್ನು ಮತ್ತು ಕೈ ಕುಲುಕುವುದನ್ನು ತಪ್ಪಿಸಬೇಕು. ಮಕ್ಕಳು, ಗರ್ಭಿಣಿಯರು ಹಾಗೂ ಹಿರಿಯ ನಾಗರಿಕರು ಸೋಂಕಿತರಿಂದ ದೂರವಿರಬೇಕು ಎಂದು ತಿಳಿಸಿದ್ದಾರೆ.

ರೋಗಲಕ್ಷಣ ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಪರೀಕ್ಷೆ ಮತ್ತು ಸೂಕ್ತ ಚಿಕಿತ್ಸೆ ಪಡೆಯಬೇಕು. ಇನ್‌ಫ್ಲುಯೆಂಜಾ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ.

ಡಾ. ನಟರಾಜ್ ಕೆ.ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಜಿಲ್ಲಾ ಆಸ್ಪತ್ರೆ ಹಾಗೂ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವೈರಲ್ ವಾರ್ಡ್ ಸಿದ್ಧಪಡಿಸಲಾಗಿದೆ. ಆಕ್ಸಿಜನ್, ವೆಂಟಿಲೇಟರ್ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ಔಷಧಿಗಳು ಲಭ್ಯವಿವೆ ಎಂದು ಇಲಾಖೆ ತಿಳಿಸಿದೆ.