ಸಹಕಾರ ಮಹಾಮಂಡಳಕ್ಕೆ ಭದ್ರಾವತಿಯ ಬಿ.ಕೆ. ಶಿವಕುಮಾರ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ ಅವರಿಗೆ 18 ಮತಗಳು ಬಂದಿವೆ. ಇವರು ಬೆಂಗಳೂರು ವಿಭಾಗದಿಂದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಪ್ರತಿನಿಧಿಯಾಗಿ ಮಹಾಮಂಡಳಕ್ಕೆ ಆಯ್ಕೆಯಾಗಿದ್ದಾರೆ. ಶಿವಕುಮಾರ್ ಅವರು ಭದ್ರಾವತಿ ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ (ಟಿಪಿಸಿಎಂಎಸ್) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಸಿ. ಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಅವರು ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

B-K-Shivakumar-director-for-Sahakara-Mahamandala