ಶಿವಮೊಗ್ಗ ಲೈವ್
ಶಿವಮೊಗ್ಗ: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸಲು ಕೆವಿಟಿಎಸ್ಡಿಸಿ ನಿಗಮದಿಂದ ಸೆಪ್ಟೆಂಬರ್ 6 ರಂದು ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೇಸ್ ಗ್ರೌಂಡ್ನಲ್ಲಿ ಸ್ಟಡಿ ಅಬ್ರಾಡ್ ಎಕ್ಸ್ಪೋ ಮಾಹಿತಿ ಶಿಬಿರ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ 60 ಕ್ಕೂ ಹೆಚ್ಚು ವಿದೇಶಿ ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿವೆ. ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿ ಹಾಗೂ ವಿದ್ಯಾರ್ಥಿ ವೇತನದ ಕುರಿತು ಒಂದೇ ವೇದಿಕೆಯಲ್ಲಿ ಸಮಗ್ರ ಮಾಹಿತಿ ಪಡೆಯಬಹುದು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಸಾಗರದ ಕಾಸ್ಪಾಡಿ ಕೆರೆ ಏರಿ ಮೇಲೆ ತಪ್ಪಿದ ಅನಾಹುತ, ಹೇಗಾಯ್ತು ಅಪಘಾತ?
ಆಸಕ್ತ ವಿದ್ಯಾರ್ಥಿಗಳು www.studyabroad.ksdckarnataka.com ವೆಬ್ಸೈಟ್ ಮೂಲಕ ನೋಂದಾಯಿಸಿಕೊಂಡು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಶೋಕ ಎಸ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ
ಕುವೆಂಪು ವಿಶ್ವವಿದ್ಯಾಲಯ, ಪೇಮೆಂಟ್ ಸೀಟ್ಗಳಿಗೆ ಡಿಸ್ಕೌಂಟ್ ಘೋಷಣೆ