ಶಿವಮೊಗ್ಗ: ಭದ್ರಾ ಜಲಾಶಯದಿಂದ ಭದ್ರಾ ಬಲದಂಡೆ ನಾಲೆಗೆ ಸೆಪ್ಟೆಂಬರ್ 1ರಿಂದ 10ರವರೆಗೆ ಪ್ರತಿದಿನ 1,500 ಕ್ಯುಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ. ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಜನ – ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ನೀರು ಹರಿಸಲಾಗುತ್ತಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಪ್ರಾದೇಶಿಕ ಆಯುಕ್ತರ ಆದೇಶದಂತೆ ಸಂಗ್ರಹಣಾ ಜಲಾಶಯಗಳಿಗಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಎಚ್ಚರಿಕೆ
ನಾಲೆಯಲ್ಲಿ ಹರಿಸುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನೀರು ಬಳಕೆ ಹಾಗೂ ನಾಲೆಯಿಂದ ಅಕ್ರಮವಾಗಿ ನೀರೆತ್ತುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ನೀರು ಹರಿಸುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಗೆ ಇಳಿಯುವುದು, ದನ– ಕರುಗಳನ್ನು ಬಿಡುವುದನ್ನು ತಪ್ಪಿಸಬೇಕು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಕ್ರಮಕ್ಕೆ ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕು ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಮನವಿ ಮಾಡಿದೆ.