ಶಿವಮೊಗ್ಗದಲ್ಲಿ ಆರೋಗ್ಯ ಇಲಾಖೆ, ಪೊಲೀಸರಿಂದ ದಾಳಿ, 14 ಕೇಸ್‌ ದಾಖಲು, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ದಿಢೀರ್‌ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸುತ್ತಿದ್ದವರ ವಿರುದ್ಧ ಒಟ್ಟು 14 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

COTPA-raid-by-Health-Department-and-Police-official-in-Shimoga-City

ನಗರದ ಮೀನಾಕ್ಷಿ ಭವನ ಸುತ್ತಲಿನ ಪ್ರದೇಶದಲ್ಲಿ ಇಂದು ಕಾರ್ಯಾಚರಣೆ ನಡೆಸಲಾಯಿತು. ನಿಯಮ ಉಲ್ಲಂಘಿಸಿದವರಿಂದ ಒಟ್ಟು ₹2700 ದಂಡ ಸಂಗ್ರಹಿಸಲಾಗಿದೆ. ಇದೇ ವೇಳೆ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಹಾಗೂ ಕೋಟ್ಪಾ ಕಾಯ್ದೆ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಯಿತು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.