ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಅಂಗವಿಕಲರ ಪಿಂಚಣಿ ಮಂಜೂರು ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದ ಉಪತಹಸೀಲ್ದಾರ್‌ಗೆ ಶಿವಮೊಗ್ಗ ನ್ಯಾಯಾಲಯವು ನಾಲ್ಕು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Shivamogga-Court-Building

ಭದ್ರಾವತಿ ತಾಲ್ಲೂಕಿನ ಡಿ.ಬಿ ಹಳ್ಳಿಯ ಗಿರೀಶ್ ಎಂಬುವವರ ತಂದೆ ಹುಟ್ಟು ಮೂಕರಾಗಿದ್ದಾರೆ. ಆದ್ದರಿಂದ ಅಂಗವಿಕಲರ ವೇತನ ಪಡೆಯಲು ಹೊಳೆಹೊನ್ನೂರು ಹೋಬಳಿಯ ಕಲ್ಲಿಹಾಳ್ ನಾಡಕಚೇರಿ ಉಪತಹಸೀಲ್ದಾರ್‌ ಪುಷ್ಪಲತಾ ಅವರನ್ನು ಭೇಟಿಯಾಗಿದ್ದರು. ಆಗ ಪುಷ್ಪಲತಾ ಪಿಂಚಣಿ ನೀಡಲು ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗಿರೀಶ್‌ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

2017ರ ಸೆಪ್ಟೆಂಬರ್ 21ರಂದು ಭದ್ರಾವತಿ ತಾಲ್ಲೂಕು ಕಛೇರಿಯಲ್ಲಿ ₹5000 ಲಂಚ ಸ್ವೀಕರಿಸುತ್ತಿದ್ದಾಗ ಉಪ ತಹಶೀಲ್ದಾರ್‌ ಪುಷ್ಪಲತಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಸಂಬಂಧ  ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಜೆ.ಎಸ್‌.ತಿಪ್ಪೇಸ್ವಾಮಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ನಾಲ್ಕು ವರ್ಷ ಜೈಲು, ದಂಡ

ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಧೀಶರು ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು ಹಾಗೂ ₹40,000 ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್ ರಾಜ್ ವಾದ ಮಂಡಿಸಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.