ಶಿವಮೊಗ್ಗ ಲೈವ್
ಭದ್ರಾವತಿ: ಇಲ್ಲಿನ ಬಿ.ಆರ್. ಪ್ರಾಜೆಕ್ಟ್‌ನಲ್ಲಿರುವ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 18 ರಂದು ಒಂದು ದಿನದ ಉಚಿತ ವಿವಿಧ ಜಲವಿನ್ಯಾಸಗಳಲ್ಲಿ ಮೀನುಮರಿ ಪಾಲನೆ ಮತ್ತು ಮೀನುಕೃಷಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಮೀನುಗಾರಿಕೆ ಇಲಾಖೆಯ ವತಿಯಿಂದ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 10ರ ಒಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಆಯ್ಕೆಯಾಗುವ ಮೊದಲ 50 ಶಿಬಿರಾರ್ಥಿಗಳಿಗೆ ಮಾತ್ರ ತರಬೇತಿಯಲ್ಲಿ ಭಾಗವಹಿಸಲು ಅವಕಾಶ ಇರಲಿದೆ.
ಸೆಪ್ಟೆಂಬರ್ 18 ರಂದು ಭದ್ರಾವತಿ ತಾಲ್ಲೂಕಿನ ಬಿ.ಆರ್. ಪ್ರಾಜೆಕ್ಟ್‌ನಲ್ಲಿರುವ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಆಸಕ್ತರು 8277200300 ಸಹಾಯವಾಣಿ ಸಂಖ್ಯೆ ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಿಂದ ಬೆಂಗಳೂರಿಗೆ ಪಾದಯಾತ್ರೆ, ದಿನಾಂಕ ಪ್ರಕಟ, ಕಾರಣವೇನು?