ಶಿವಮೊಗ್ಗ: ಜಿಲ್ಲೆಯಾದ್ಯಂತ ಏನೆಲ್ಲ ನಡೆಯಿತು. ಇಲ್ಲಿದೆ ಟಾಪ್ 5 ಸುದ್ದಿಗಳು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆ ನಡೆಸಿದ ಜಾಗ ಶುದ್ದೀಕರಣ ಮಾಡುವ ಮೂಲಕ ಜಾತಿ ತಾರತಮ್ಯ ಮಾಡಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
‘ಹಳ್ಳಿ ಹಳ್ಳಿಗೆ ಭೇಟಿ ನೀಡಲಿದ್ದೇನೆʼ

ಸೊರಬ: ಪಟ್ಟಣದ ಪ್ರವಾಸಿ ಮಂದಿರದಲ್ಲಿ 11 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಮುಖಂಡರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಮುಂದಿನ ಮೂರು ತಿಂಗಳಲ್ಲಿ ಸೊರಬ ಕ್ಷೇತ್ರದ ಪ್ರತಿ ಹಳ್ಳಿಗೂ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಿದ್ದೇನೆ. ಅಷ್ಟರೊಳಗೆ ಸಭೆಯಲ್ಲಿ ಪ್ರಸ್ತಾಪಿಸಿರುವ ಜನರ ಸಮಸ್ಯೆಗಳು ಬಗೆಹರಿದಿರಬೇಕು ಎಂದು ತಹಸೀಲ್ದಾರ್ ಮತ್ತು ಅಧಿಕಾರಿಗಳಿಗೆ ಸೂಚಿಸಿದರು.
ಸಾಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಸಭೆ ನಡೆಯಿತು. ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ, ಮಳೆ ಮಾಪನ ಕೇಂದ್ರ ದುರಸ್ತಿ, ಸೊರಬ ರಸ್ತೆ ವಿಸ್ತರಣೆ ಸೇರಿ ಪ್ರಮುಖ ವಿಚಾರಗಳನ್ನು ಚರ್ಚಿಸಲಾಯಿತು. ಅಧಿಕಾರಿಗಳು ಪ್ರಚಾರಕ್ಕೆ ಕೆಲಸ ಮಾಡದಂತೆ ಶಾಸಕರು ತಾಕೀತು ಮಾಡಿದರು.
ತೀರ್ಥಹಳ್ಳಿಗೆ ನೂತನ ಡಿವೈಎಸ್ಪಿ

ತೀರ್ಥಹಳ್ಳಿ: ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನು ಪ್ರಕಾಶ್ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಮೂಲದ ಡಾ.ಭಾನು ಪ್ರಕಾಶ್ ಅವರಿಗೆ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನಿವೃತ್ತಿಯ ನಂತರ ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಉಸ್ತುವಾರಿಯಾಗಿದ್ದರು.
ಕಾಲೇಜು ಮುಂದೆ ಹೈಸ್ಕೂಲ್ ಮಕ್ಕಳ ಪ್ರತಿಭಟನೆ

ಹೊಳೆಹೊನ್ನೂರು: ಕಲ್ಲಿಹಳ್ನಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪಿಯು ಕಾಲೇಜು ವಿದ್ಯಾರ್ಥಿಗಳು ಚುಡಾಯಿಸುತ್ತಿದ್ದಾರೆ ಎಂದು ಆರೋಪಿಸಿ ಶಾಲೆ ವಿದ್ಯಾರ್ಥಿನಿಯರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು. ಇಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳು ಒಂದೇ ಕಾಂಪೌಂಡ್ನಲ್ಲಿವೆ.