ಸಂತೆ ಕಡೂರು ಬಳಿ ಅಪಘಾತ, ಬೈಕ್‌ ಸವಾರ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ: ಸಂತೆ ಕಡೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೃತನನ್ನು ಮಂಡೇನಕೊಪ್ಪ ಗ್ರಾಮದ ರಕ್ಷಿತ್.ಎನ್ (23) ಎಂದು ಗುರುತಿಸಲಾಗಿದೆ. ಸಂತೆ ಕಡೂರು ಸಮೀಪದ ದೇವಕಿ ರೆಸಾರ್ಟ್‌ ಎದುರು ಚಲಿಸುತ್ತಿದ್ದ ಕಾರಿನ ಹಿಂಬದಿಗೆ ರಕ್ಷಿತ್‌ ಚಲಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದೆ.

Bike-hits-car-in-front-of-Devaki-Resort-near-Sante-Kadur

ಹೇಗಾಯ್ತು ಅಪಘಾತ?

ಘಟನೆಯಲ್ಲಿ ಪಲ್ಸರ್ ಬೈಕ್ ಸವಾರ ರಕ್ಷಿತ್ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿತ್ತು. ಅಪಘಾತದ ತೀವ್ರತೆಗೆ ಕಾರಿನ ಹಿಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ. ತೀವ್ರ ರಕ್ತಸ್ರಾವದಿಂದ ಬಳಲಿದ ರಕ್ಷಿತ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ