ಶಿವಮೊಗ್ಗ ಲೈವ್
ತೀರ್ಥಹಳ್ಳಿ: ತಾಲ್ಲೂಕಿನ ಹಣಗೆರೆಯ ಶ್ರೀ ಚೌಡೇಶ್ವರಿ – ಸಯ್ಯದ್ ಸಾದತ್ ದರ್ಗಾದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಒಟ್ಟು ₹1,01,73,650 ನಗದು ಸಂಗ್ರಹವಾಗಿದೆ.
ಕಾಣಿಕೆ ರೂಪದಲ್ಲಿ ಭಕ್ತರು ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕೂಡ ಅರ್ಪಿಸಿದ್ದರು. ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಕುಮಾರ್, ಉಪವಿಭಾಗಾಧಿಕಾರಿ ಡಾ.ಮೈತ್ರಿ ಅವರು ಭೇಟಿ ನೀಡಿ ಕಾಣಿಕೆ ಎಣಿಕೆ ಕಾರ್ಯವನ್ನು ಪರಿಶೀಲಿಸಿದರು.
ಈ ಸಂದರ್ಭ ತಹಸೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರೆಹಳ್ಳಿ ರಾಮಪ್ಪ ಹಾಗೂ ಸಮಿತಿಯ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಸಹಾಯಕ, ದೇವಸ್ಥಾನದ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.