ಪೊಲೀಸ್‌ ಚೌಕಿ ಬಳಿ ಹಿಟ್‌ ಅಂಡ್‌ ರನ್‌ ಅಪಘಾತ, ದಂಪತಿಗೆ ಚಿಕಿತ್ಸೆ

ಶಿವಮೊಗ್ಗ: ಚಲಿಸುತ್ತಿದ್ದದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದಂಪತಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು, ಅಪಘಾತಪಡಿಸಿದ ಚಾಲಕ ಕಾರು  ನಿಲ್ಲಿಸದೆ ಪರಾರಿಯಾಗಿದ್ದಾನೆ.

ರಘು ಹೆಚ್.ಆರ್ (54) ಹಾಗೂ ಅನಿತಾ (52) ದಂಪತಿ ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ಸೋಮಿನಕೊಪ್ಪದ ಮದುವೆ ಸಮಾರಂಭ ಒಂದರಲ್ಲಿ ಪಾಲ್ಗೊಳ್ಳಲು ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದರು. ವಿನೋಬನಗರದ ಸೋಮಿನಕೊಪ್ಪ ರಸ್ತೆಯಲ್ಲಿ ಪೊಲೀಸ್ ಚೌಕಿ ಕಡೆಯಿಂದ ಹೋಗುತ್ತಿದ್ದಾಗ, ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.  

ACCIDENT-NEWS-GENERAL-IMAGE.

ಘಟನೆಯಲ್ಲಿ ದಂಪತಿ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅಪಘಾತಪಡಿಸಿದ ಚಾಲಕ ಕಾರನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ.29ರಂದು ಘಟನೆ ನಡೆದಿದೆ. ಈ ಸಂಬಂಧ ತಡವಾಗಿ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ