ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 4 ಪ್ಯಾರಾಗಳು ಕೆಳಗಿವೆ)
ಡೆಲಿವರಿ ಪ್ರವೇಟ್ ಲಿಮಿಟೆಡ್ ಹಾಗೂ ಶ್ರೀರಾಮ್ ಲೈಫ್ ಇನ್ಶೂರೆನ್ಸ್ ಕಂಪನಿಗಳು ಈ ಸಂದರ್ಶನದಲ್ಲಿ ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 35 ವರ್ಷ ವಯಸ್ಸಿನೊಳಗಿನ ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.