ಸಚಿವ ಮಧು ಬಂಗಾರಪ್ಪಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ, ಕಾರಣವೇನು?

ಶಿಕಾರಿಪುರ: 1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಶಿಕ್ಷಕ ಪ್ರಶಾಂತ್ ಸಿರೇಂಜ್ ಮೂಲಕ ತಮ್ಮ ರಕ್ತವನ್ನು ತೆಗೆದುಕೊಂಡು ಪತ್ರ ಬರೆದಿದ್ದಾರೆ. ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Shikaripura-Kannada-Medium-Private-School-Teacher-writes-letter-to-Minister-Madhu-Bangarappa-in-Blood

ಅನುದಾನ ಸಮಸ್ಯೆಗೆ ಕಾರಣವೇನು?

1995ರ ನಂತರ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ರಾಜ್ಯ ಸರ್ಕಾರ ಅನುದಾನ ನಿಲ್ಲಿಸಿದೆ. ಈ ಕುರಿತು ಕನ್ನಡ ಮಾದ್ಯಮ ಶಾಲೆಗಳ ಶಿಕ್ಷಕರು ಬೆಂಗಳೂರಿನಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆ ಸಂದರ್ಭ ಕನ್ನಡ ಶಾಲೆಗಳಿಗೆ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ನನ್ನ ರಕ್ತದಲ್ಲೇ ಕನ್ನಡವಿದೆ ಎಂದು ಸಚಿವ ಮಧು ಬಂಗಾರಪ್ಪ ಈ ಹಿಂದ ಹೇಳಿದ್ದರು. ಇದೇ ಕಾರಣಕ್ಕೆ ಅವರಿಗೆ ರಕ್ತದಲ್ಲಿ ಪತ್ರ ಬರೆಯುತ್ತಿದ್ದೇನೆ. ಸದ್ಯದ ಸ್ಥಿತಿಯಲ್ಲಿ ಅನುದಾನವಿಲ್ಲದೆ ಕನ್ನಡ ಶಾಲೆಗಳಿಗೆ ರಕ್ತವೆ ಇಲ್ಲದಂತಾಗಿದೆ.

– ಪ್ರಶಾಂತ್‌, ಕನ್ನಡ ಮಾದ್ಯಮ ಶಾಲೆಯ ಶಿಕ್ಷಕ, ಶಿಕಾರಿಪುರ

ಇನ್ನಷ್ಟು ಶಿಕ್ಷಕರಿಂದ ನೆತ್ತರ ಪತ್ರ

ಮೊದಲು ತಾನು ಸ್ವತಃ ತನ್ನ ರಕ್ತದಿಂದ ಪತ್ರ ಬರೆಯುತ್ತಿರುವುದಾಗಿ ತಿಳಿಸಿರುವ ಶಿಕ್ಷಕ ಪ್ರಶಾಂತ್‌, ಬೇಡಿಕೆ ಈಡೇರದಿದ್ದರೆ ನವೆಂಬರ್ 1 ರಂದು ಕನ್ನಡ ಶಾಲೆಗಳ ಉಳಿದ ಶಿಕ್ಷಕರು ಸಹ ತಮ್ಮ ರಕ್ತದಿಂದಲೇ ಪತ್ರ ಬರೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ