ಬೈಕ್‌ ಅಡ್ಡಗಟ್ಟಿ ಮೆಕಾನಿಕ್‌ಗೆ ಚಾಕು ಇರಿದ ದುಷ್ಕರ್ಮಿಗಳು, ಎಲ್ಲಿ? ಆಗಿದ್ದೇನು?

ಶಿವಮೊಗ್ಗ: ನಗರದ ಗುಂಡಪ್ಪ ಶೆಡ್ ರೈಲ್ವೆ ಹಳಿ ಪಕ್ಕದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಮೆಕಾನಿಕ್ ಒಬ್ಬರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಘಟನೆ ಸೆಪ್ಟೆಂಬರ್ 2ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಮೀರ್ ಅಹಮದ್ ಕಾಲೋನಿ ನಿವಾಸಿ ಮೊಹಮ್ಮದ್ ಮುಸ್ತಾಫ (25) ಹಲ್ಲೆಗೊಳಗಾದವರು. ಎಂದಿನಂತೆ ಕೆಲಸ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೊಹಮ್ಮದ್ ಮುಸ್ತಾಫ ಅವರು ಬೈಕ್‌ನಲ್ಲಿ ಗುಂಡಪ್ಪ ಶೆಡ್ ರೈಲ್ವೆ ಹಳಿ ಪಕ್ಕದ ಲಕ್ಷ್ಮಿ ಸಾಮಿಲ್ ಹತ್ತಿರ ಬಂದಾಗ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ ನಾಲ್ವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಅವಾಚ್ಯವಾಗಿ ಬೈದು, ಹೊಡೆದು, ಚಾಕುವಿನಿಂದ ಎಡಗೈ ರಟ್ಟೆ ಹಾಗೂ ಹೊಟ್ಟೆಯ ಎಡಭಾಗಕ್ಕೆ ಇರಿದಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kote Police station building

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ