ಮರಳು ಗಣಿಗಾರಿಕೆ, ಅಧಿಕಾರಿಗಳು ದಾಳಿ, ವಾಹನಗಳು ವಶಕ್ಕೆ

ಶಿವಮೊಗ್ಗ: ತುಂಗಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಹಾಗೂ ಟ್ರಾಕ್ಟರ್ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಗೊಂದಿ ಚಟ್ನಳ್ಳಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ನದಿ ಪಾತ್ರದಲ್ಲಿ ಜೆಸಿಬಿ ಬಳಸಿ ಅಕ್ರಮವಾಗಿ ಮರಳು ತೆಗೆದು ಜರಡಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಸುಮಾರು 100 ಮೆಟ್ರಿಕ್ ಟನ್ ಜರಡಿ ಮಾಡದ ಮರಳು, ₹10,200 ಮೌಲ್ಯದ 10 ರಿಂದ 12 ಮೆಟ್ರಿಕ್ ಟನ್ ಜರಡಿ ಮಾಡಿದ ಮರಳು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-SAND-MINING-FILE-PHOTO.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ