ಆಯನೂರಿನ ಹಣಗೆರೆಕಟ್ಟೆ ಕ್ರಾಸ್‌ನಲ್ಲಿ ಬೈಕ್‌ಗೆ ಕಾರು ಡಿಕ್ಕಿ

ಆಯನೂರು: ಹಣಗೆರೆಕಟ್ಟೆ ಕ್ರಾಸ್ ಬಳಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಗಾಯಗೊಂಡಿದ್ದಾರೆ.

ಕೋಣಂದೂರಿನಿಂದ ಹಿಂತಿರುಗುತ್ತಿದ್ದ ವೇಳೆ ಆಯನೂರು ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಹಣಗೆರೆಕಟ್ಟೆ ಕಡೆಯಿಂದ ಬಂದ ಕಾರು ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ನವೀನ್‌ ಕುಮಾರ್‌, ಶೇಖ್‌ ಮೊಹಮ್ಮದ್‌, ಸೃಜನ್‌ ಗಾಯಗೊಂಡಿದ್ದಾರೆ. ಶೇಖ್‌ ಮೊಹಮ್ಮದ್‌ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ayanuru-in-Shimoga-Taluk.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ