ಶಿವಮೊಗ್ಗ ಲೈವ್
ಶಿವಮೊಗ್ಗ: ಸಾರ್ವತ್ರಿಕ ಗಣೇಶೋತ್ಸವ ಹಿನ್ನೆಲೆ ಮೆಸ್ಕಾಂ ವತಿಯಿಂದ ಏಕಗವಾಕ್ಷಿ ಪದ್ಧತಿಯಲ್ಲಿ ವಿದ್ಯುತ್ ಮಂಜೂರಾತಿ ನೀಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 9 ರಿಂದ 14 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ.
ಶಿವಮೊಗ್ಗ ನಗರದ ಗುಡ್‌ಲಕ್ ಸರ್ಕಲ್ ಹತ್ತಿರ ಸ್ವಾಮಿ ವಿವೇಕಾನಂದ ಬಡಾವಣೆಯ ನಗರ ಉಪ ವಿಭಾಗ-3 ಮೆಸ್ಕಾಂ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಬಹುದು. ಗಣೇಶೋತ್ಸವ ಸಮಿತಿಗಳು ಹಾಗೂ ಸಾರ್ವಜನಿಕರು ಅವಕಾಶವನ್ನು ಉಪಯೋಗ ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
