ಭದ್ರಾವತಿ, ಕುಂಸಿ ವ್ಯಾಪ್ತಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

ವಿದ್ಯುತ್‌ ವ್ಯತ್ಯಯ: ವಿವಿಧ ಕಾಮಗಾರಿಗಳ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಇವತ್ತು ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಇಲ್ಲಿದೆ ಡಿಟೇಲ್ಸ್‌.

ಭದ್ರಾವತಿಯಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

ಮೆಸ್ಕಾಂ ನಗರ ಉಪವಿಭಾಗ ಘಟಕ-4ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.9ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಸೀಗೇಬಾಗಿ, ಹಳೇ ಸೀಗೇಬಾಗಿ, ಭದ್ರಾ ಕಾಲೋನಿ, ಸತ್ಯಸಾಯಿ ನಗರ, ಸೈಯ್ಯದ್ ಕಾಲೋನಿ, ಕಣಕಟ್ಟೆ, ವೀರಾಪುರ, ರಾಮನಗರ ಸೇರಿದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

power cut mescom ELECTRICITY

ಕುಂಸಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ

ಕುಂಸಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಸೆ.9 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಕುಂಸಿ ಮತ್ತು ಹಾರನಹಳ್ಳಿ ಶಾಖಾ ವ್ಯಾಪ್ತಿಗೆ ಬರುವ ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಶೆಟ್ಟಿಕೆರೆ, ರೆಚಿಕೊಪ್ಪ, ಚಾಮೇನಹಳ್ಳಿ, ವಿಠಗೊಂಡನಕೊಪ್ಪ, ಕೆಸುವಿನ ಕಟ್ಟು, ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ನಾಗರಬಾವಿ, ಸುತ್ತುಕೋಟೆ, ಹಿಟ್ಟೂರು, ಬೈರನಕೊಪ್ಪ, ಬೈರನಕೊಪ್ಪ ಕ್ಯಾಂಪ್, ಮೈಸವಳ್ಳಿ, ಸೇವಾಲಾಲ್ ನಗರ ಮತ್ತು ವಾಲಕೇಶಪುರ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ