ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10 ಮತ್ತು 11 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ.
ಸೆಪ್ಟೆಂಬರ್ 10ರ ಬೆಳಿಗ್ಗೆ 10:30ಕ್ಕೆ ಸಚಿವ ಎಸ್.ಮಧು ಬಂಗಾರಪ್ಪ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರು, ಶಾಸಕರು ಸೇರಿ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
