ಶಿವಮೊಗ್ಗ ಲೈವ್
ಶಿವಮೊಗ್ಗ: ಸೆ.12 ರಂದು ಬೆಳಿಗ್ಗೆ 10 ಗಂಟೆಗೆ ಹಾರನಹಳ್ಳಿ ಅಂಬೇಡ್ಕರ್ ಭವನದಲ್ಲಿ ಹಾರನಹಳ್ಳಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಶಿವಮೊಗ್ಗ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
