ರೈತರು, ರೈತ ಮಹಿಳೆಯರಿಗೆ ಪ್ರಶಸ್ತಿ, ಅರ್ಜಿ ಸಲ್ಲಿಸಲು ಸೂಚನೆ, ಯಾರೆಲ್ಲ ಅರ್ಹರು? ಕೊನೆಯ ದಿನಾಂಕ ಯಾವಾಗ?

ಶಿವಮೊಗ್ಗ: ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 30ರ ಸಂಜೆ 5:30ರ ಒಳಗೆ  ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆತ್ಮ ಯೋಜನೆಯಡಿ ಸಮಗ್ರ ಬೆಳೆ ಪದ್ಧತಿ, ಸಾವಯವ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆಬೇಸಾಯ, ಕೃಷಿ ಸಂಸ್ಕರಣೆ ಸೇರಿ ವಿವಿಧ ಕೃಷಿ ಹಾಗೂ ಪೂರಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಆಸಕ್ತರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Agriculture-News-Farmer

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ