ಸೋಮಿನಕೊಪ್ಪದಲ್ಲಿ 10ನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಸೋಮಿನಕೊಪ್ಪ ಕೆರೆಯಲ್ಲಿ ಘಟನೆ ನಡೆದಿದೆ. ಮೊಹಮ್ಮದ್‌ ಬುರಾನ್‌ (16) ಮೃತ ಬಾಲಕ.

ಸೋಮಿನಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬುರಾನ್‌, ಇಂದು ಬೆಳಿಗ್ಗೆ ಕೆರೆಗೆ ಈಜಲು ಹೋಗಿದ್ದ ಎಂದು ತಿಳಿದು ಬಂದಿದೆ. ಈ ವೇಳೆ ಆತ ನಾಪತ್ತೆಯಾಗಿದ್ದ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಸ್ವಲ್ಪ ಸಮಯದ ಬಳಿಕ ಬುರಾನ್‌ ಮೃತದೇಹ ಪತ್ತೆಯಾಗಿದೆ. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

rescue-operation-at-sominakoppa-lake-in-Shivamogga

Bhovi Samaja Prathiba Puraskara

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ